ಹೊಸದಿಗಂತ ಡಿಜಿಟಲ್ ಡೆಸ್ಕ್:
1984ರ ನವೆಂಬರ್ 1ರಂದು ಸರಸ್ವತಿ ವಿಹಾರ್ ಪ್ರದೇಶದಲ್ಲಿ ತಂದೆ- ಮಗನ ಹತ್ಯೆಗೆ ಸಂಬಂಧಿಸಿದ 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ನ ಮಾಜಿ ಸಂಸದ ಸಜ್ಜನ್ ಕುಮಾರ್ ಅವರಿಗೆ ಮರಣ ದಂಡನೆ ಶಿಕ್ಷೆ ವಿಧಿಸುವಂತೆ ಪ್ರಾಸಿಕ್ಯೂಷನ್ ಮನವಿ ಮಾಡಿದೆ. ಫೆಬ್ರವರಿ 21ರಂದು ಶಿಕ್ಷೆ ಪ್ರಕಟಗೊಳ್ಳಲಿದೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಬೃಹತ್ ಗುಂಪನ್ನು ಸಜ್ಜನ್ ಕುಮಾರ್ ಮುನ್ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಇನ್ನೂ ಲಿಖಿತ ಹೇಳಿಕೆಗಳನ್ನು ಸಲ್ಲಿಸದಿದ್ದರೂ, ನಿರ್ಭಯಾ ಮತ್ತು ಇತರ ಪ್ರಕರಣಗಳಲ್ಲಿ ಮಾರ್ಗಸೂಚಿಗಳ ಆಧಾರದ ಮೇಲೆ ಮರಣದಂಡನೆ ವಿಧಿಸಬೇಕೆಂದು ಅವರು ಕೋರಿದ್ದಾರೆ ಎಂದು ಸಂಸ್ಥೆ ವರದಿ ಮಾಡಿದೆ.