ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಹೈಕೋರ್ಟ್ನಲ್ಲಿ ಸಿಕ್ಕ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ಹಾಗಾಗಿ ದರ್ಶನ್ ಹಾಗೂ ಇನ್ನುಳಿದ ಆರೋಪಿಗಳಿಗೆ ಮತ್ತೆ ಕಾನೂನಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಸುಪ್ರೀಂ ಕೋರ್ಟ್ನಲ್ಲಿ ತಮ್ಮ ಪರ ವಾದ ಮಾಡಲು ಖ್ಯಾತ ವಕೀಲರನ್ನೇ ದರ್ಶನ್ ಸಂಪರ್ಕಿಸಿದ್ದಾರೆ. ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಕುಟುಂಬದವರು ಭೇಟಿ ಆಗಿದ್ದಾರೆ.
ಕಪಿಲ್ ಸಿಬಲ್ ಭೇಟಿಯಾಗಿ ಚರ್ಚೆ ನಡೆಸಲಾಗಿದೆ. ಹೈಕೋರ್ಟ್ನಲ್ಲಿ ನಡೆದ ವಾದ-ಪ್ರತಿವಾದ ಹಾಗೂ ಕೇಸ್ ಹಿಸ್ಟರಿಯ ಮಾಹಿತಿಯನ್ನು ಅವರಿಗೆ ನೀಡಲಾಗಿದೆ. ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಪರವಾಗಿ ಕಪಿಲ್ ಸಿಬಲ್ ಅವರು ಸುಪ್ರೀಂ ಕೋರ್ಟ್ನಲ್ಲಿ ವಾದ ಮಾಡಲಿದ್ದಾರೆ.
ಮಾರ್ಚ್ 18ರಂದು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ವಿಚಾರಣೆ ನಡೆಯಲಿದೆ. ಈಗಾಗಲೇ ಹೈಕೋರ್ಟ್ನಲ್ಲಿ ಗೆಲುವು ಪಡೆದ ರೀತಿಯೇ ಸುಪ್ರೀಂ ಕೋರ್ಟ್ನಲ್ಲಿ ಕೂಡ ಗೆಲುವಿಗೆ ದರ್ಶನ್ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ಖ್ಯಾತ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಕುಟುಂಬದವರು ನೇಮಿಸಿಕೊಂಡಿದ್ದಾರೆ. ಸುಪ್ರೀಂ ಕೋರ್ಟ್ ಯಾವ ರೀತಿ ತೀರ್ಪು ನೀಡಲಿದೆ ಎಂಬುದರ ಮೇಲೆ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನುಳಿದ ಆರೋಪಿಗಳ ಭವಿಷ್ಯ ನಿರ್ಧಾರ ಆಗಲಿದೆ.