ಇನ್ನುಂದೆ ʻಅನ್ನಭಾಗ್ಯʼ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

2023ರ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲಿಗೆ ಅಕ್ಕಿಯನ್ನೇ ಕೊಡಲು ಸರ್ಕಾರ ತೀರ್ಮಾನಿಸಿದೆ.

ಅಗತ್ಯ ಪ್ರಮಾಣದಲ್ಲಿ ಅಕ್ಕಿ ಲಭ್ಯವಾಗದ ಕಾರಣ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಕೊಟ್ಟು, ಉಳಿದ 5 ಕೆಜಿ ಅಕ್ಕಿ ಬದಲಿಗೆ 170 ರೂ. ನೀಡಲಾಗುತ್ತಿತ್ತು.

ಇದೀಗ ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯನ್ನು OMSS ಯೋಜನೆ ಅಡಿಯಲ್ಲಿ ಖರೀದಿಸಿ ಈ ತಿಂಗಳಿನಿಂದಲೇ ಅಕ್ಕಿ ವಿತರಿಸಲು ತೀರ್ಮಾನಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!