ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಳಗ್ಗೆ 11 ಗಂಟೆಗೆ ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಮ್ ಲೀಲಾ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರೇಖಾ ಗುಪ್ತಾ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರೇಖಾ ಗುಪ್ತಾ ಅವರು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಸ್ಸೇನಾ ಅವರನ್ನು ಭೇಟಿಯಾಗಿ ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರು ದೆಹಲಿಯಲ್ಲಿ ಪಕ್ಷ ಅಧಿಕಾರಕ್ಕೆ ಮರಳಿದ ಸಂಭ್ರಮವನ್ನು ಆಚರಿಸಿದ್ದಾರೆ.