Tuesday, January 27, 2026
Tuesday, January 27, 2026
spot_img

ಶ್ರೀನಗರ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: ಸಿಆರ್‌ಪಿಎಫ್ ಯೋಧ ಸಹಿತ ನಾಲ್ವರು ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸಿಆರ್‌ಪಿಎಫ್ ಯೋಧ ಸೇರಿ ನಾಲ್ವರು ಸಾವು ಮೃತಪಟ್ಟಿದ್ದಾರೆ. .

ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಶಾರದಾ ಮಾತಾ ಬಳಿ ಖೈರಿ ಪ್ರದೇಶದಲ್ಲಿ ಉಧಂಪುರ ಕಡೆಗೆ ಹೋಗುತ್ತಿದ್ದ ಬಸ್ ಅತಿ ವೇಗದಲ್ಲಿ ಚಲಿಸುತ್ತಿದ್ದ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯಿಂದ ಮೋಟಾರ್ ಸೈಕಲ್ ಸವಾರ ಮತ್ತು ಹಿಂಬದಿ ಸವಾರ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೆಕ್ಯಾನಿಕ್ ಮತ್ತು ಲೋಡ್ ಕ್ಯಾರಿಯರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವ್ಯಕ್ತಿಗಳು ತುರ್ತು ಕಿಟಕಿಯಿಂದ ಹೊರಗೆ ಎಸೆಯಲ್ಪಟ್ಟು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬಲಿಯಾದವರಲ್ಲಿ ಒಬ್ಬ ಸಿಆರ್‌ಪಿಎಫ್ ಯೋಧ ಸೇರಿದ್ದಾರೆ. ರಜೆಯ ಮೇಲೆ ಮನೆಗೆ ಪ್ರಯಾಣಿಸುತ್ತಿದ್ದ ಈ ಯೋಧ ಉಧಂಪುರ ಕಡೆಗೆ ಹೋಗುತ್ತಿದ್ದ ಬಸ್‌ನಲ್ಲಿದ್ದರು ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಬಸ್‌ನ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !