ಹೊಸದಿಗಂತ ವರದಿ ಚಿಕ್ಕಮಗಳೂರು:
ಕಾಫಿ ತೋಟದಲ್ಲಿ ಬೇಟೆಗಾರರು ಹಾಕಿದ್ದ ಉರುಳಿಗೆ ಸಿಲುಕಿದ ಚಿರತೆಯೊಂದು ಸಾವು ಬದುಕಿನ ನಡುವೆ ಹೊರಾಟ ನಡೆಸುತ್ತಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಕಾಫಿ ತೋಟವೊಂದರಲ್ಲಿ ನಡೆದಿದೆ.
ಕಾಡುಹಂದಿ ಬೇಟೆಗೆ ಉರುಳು ಹಾಕಿದ್ದ ಬೇಟೆಗಾರರು ಘಟನೆ ಬಳಿಕ ಪರಾರಿಯಾಗಿದ್ದಾರೆ.
ಮೂಡಿಗೆರೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿದ್ದು, ಚಿರತೆಯನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ. ಶಿವಮೊಗ್ಗದಿಂದ ಅರವಳಿಕೆ ತಜ್ಞರನ್ನು ಕರೆಸಲಾಗುತ್ತಿದೆ. ಪರಾರಿಯಾದ ಬೇಟೆಗಾರರ ಬಂಧನಕ್ಕಾಗಿ ಕಾರ್ಯಾಚರಣೆ ಆರಂಭಿಸಲಾಗಿದ್ದು, ಅಕ್ರಮ ಬೇಟೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.