ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನ ವಾಯುಗುಣಮಟ್ಟ ಮತ್ತೆ ಸಹಜ ಸ್ಥಿತಿಗೆ ಮರುಕಳಿಸುತ್ತಿದೆ.
ಹೌದು, ದೆಹಲಿಯ ದಾರಿಯಲ್ಲಿ ಸಾಗುತ್ತಿದ್ದ ಬೆಂಗಳೂರಿನ ವಾಯುಮಟ್ಟ ಗಣನೀಯವಾಗಿ ಚೇತರಿಕೆ ಕಂಡಿದೆ.
ಮಂಗಳವಾರ ವಾಯುಗುಣಮಟ್ಟ ಚೇತರಿಕೆ ಕಂಡಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಎರಡು ಮೂರು ತಿಂಗಳಿಗೆ ಹೋಲಿಸಿದರೆ ಈಗ ಏರ್ ಕ್ವಾಲಿಟಿ ಉತ್ತಮವಾಗುತ್ತಿದೆ.
ಮಂಗಳವಾರ ಬೆಂಗಳೂರಿನ ವಾಯುಗುಣಮಟ್ಟ 129 ಇದ್ದು, ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇಂದಿನ ಮಟ್ಟಿಗೆ ಗಣನೀಯ ಚೇತರಿಕೆಯಾಗಿದೆ. ಆದರೂ ಇಂದಿಗೂ ಗಾಳಿಯು ಕಲುಷಿತವಾಗಿಯೇ ಇದ್ದು, ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.



