ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದಂತೆಯೇ ಮುಸ್ಲಿಂ ಸರ್ಕಾರಿ ನೌಕರರಿಗೆ ಪವಿತ್ರ ರಂಜಾನ್ ಸಂದರ್ಭದಲ್ಲಿ ಸಂಜೆ 4 ಗಂಟೆಯ ನಂತರ ಎರಡು ಗಂಟೆ ಬೇಗ ಕರ್ತವ್ಯದಿಂದ ತೆರಳಲು ಅವಕಾಶ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.
ಕೆಪಿಸಿಸಿ ಉಪಾಧ್ಯಕ್ಷ ಹುಸೇನ್ ಅವರು ಈ ಕುರಿತು ಔಪಚಾರಿಕ ಮನವಿ ಸಲ್ಲಿಸಿದ್ದು, ಈ ಬೇಡಿಕೆ ಈಡೇರಿಕೆಗಾಗಿ ಮುಖಂಡರು ಶೀಘ್ರವೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿಸಿದರು.
ಆಂಧ್ರಪ್ರದೇಶ ಮತ್ತು ತೆಲಂಗಾಣ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಮುಸ್ಲಿಂ ಸರ್ಕಾರಿ ನೌಕರರಿಗೆ ರಂಜಾನ್ ಸಂದರ್ಭದಲ್ಲಿ ಎರಡು ಗಂಟೆ ಮುಂಚಿತವಾಗಿ ಕರ್ತವ್ಯದಿಂದ ತೆರಳಲು ಅವಕಾಶ ನೀಡುವಂತೆ ಕೆಪಿಸಿಸಿ ಉಪಾಧ್ಯಕ್ಷರಾದ ಸೈಯದ್ ಅಹ್ಮದ್ ಮತ್ತು ಎಆರ್ಎಂ ಹುಸೇನ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಬೇಡಿಕೆಗೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರಿಗೂ ಪತ್ರ ಬರೆದಿದ್ದಾರೆ.