ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದಲ್ಲಿ ಹಿಮಪಾತ ಆಗುತ್ತಿದ್ದು, ಕಡು ಚಳಿಯ ಅಬ್ಬರ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ತಾಪಮಾನದಲ್ಲಿ ತೀವ್ರ ಕುಸಿತವಾಗಿರುವುದರಿಂದ ಲಕ್ಷಾಂತರ ಮಂದಿ ವಿದ್ಯುತ್ ಇಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ತೀವ್ರ ಶೀತದ ಪರಿಣಾಮವಾಗಿ ಈವರೆಗೂ 30ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವ ಸಾಧ್ಯತೆ ಇದ್ದು, ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಆತಂಕವಿದೆ.
ನ್ಯೂ ಇಂಗ್ಲೆಂಡ್ ಸೇರಿದಂತೆ ಪೂರ್ವ ಅಮೆರಿಕದ ಭಾಗಗಳಲ್ಲಿ ಭಾರೀ ಹಿಮಪಾತದಿಂದ ಚಳಿಗಾಲದ ಬಿರುಗಾಳಿ ಆವರಿಸಿದೆ. ಪ್ರಸ್ತುತ ಉಂಟಾಗಿರುವ ಭೀಕರ ಹಿಮ ಬಿರುಗಾಳಿಯಿಂದ ಅಮೆರಿಕದಲ್ಲಿ ಭಾರಿ ಅನಾಹುತ ಸಂಭವಿಸಿದೆ. ಇದರೊಂದಿಗೆ ಜೀವಹಾನಿಯ ಪ್ರಮಾಣವೂ ಹೆಚ್ಚಾಗಿದೆ.



