ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ಅಬ್ಬರ ಹೆಚ್ಚಾಗುತ್ತಿದೆ. ಈ ಮೂಲಕ ತಾಪಮಾನದ ಸನಿಹಕ್ಕೆ ತಲುಪಿದೆ. ಇಂದು ಸಹ ಬಿಸಿಲಿನ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಕಾರವಾರ, ದಕ್ಷಿಣ ಕನ್ನಡ ಸೇರಿದಂತೆ ಉತ್ತರ ಕರ್ನಾಟಕದ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.