ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ಪ್ರಕರಣವನ್ನು ಕೈಬಿಡುವಂತೆ ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಫೆಬ್ರವರಿ 28ಕ್ಕೆ ಮುಂದೂಡಿ ಆದೇಶಿಸಿತು.
ಅರ್ಜಿಗೆ ಸಿಐಡಿ ಎಸ್ ಪಿ ಪಿ ಬಿ ಎನ್ ಜಗದೀಶ್ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಪ್ರಜ್ವಲ್ ರೇವಣ್ಣ ಪರ ವಕೀಲರು ವಾದ ಮಂಡಿಸಲು ಸದ್ಯ ವಿಚಾರಣೆ ಮುಂದೂಡಿಕೆ ಮಾಡಲಾಯಿತು. ಫೆಬ್ರವರಿ 28ಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಿಗದಿಪಡಿಸಿದೆ.