Mann ki Baat | ಬೊಜ್ಜು ಸಮಸ್ಯೆ ನಿವಾರಣೆಗೆ ಸಲಹೆ ನೀಡಿದ ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೇಶದ ಜನರಲ್ಲಿ ಬೊಜ್ಜಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಪ್ರತಿ 8 ಮಂದಿಯಲ್ಲಿ ಒಬ್ಬರಿಗೆ ಬೊಜ್ಜಿನ ಸಮಸ್ಯೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಮನ್​ ಕಿ ಬಾತ್​ನಲ್ಲಿ ಕಳವಳ ವ್ಯಕ್ತಪಡಿಸಿದರು.

ಕಳೆದ ಕೆಲವು ವರ್ಷಗಳಿಂದ ಬೊಜ್ಜು ಸಮಸ್ಯೆ ದ್ವಿಗುಣಗೊಂಡಿದೆ. ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ. ನೀವು ಸಣ್ಣ ಸಣ್ಣ ಪ್ರಯತ್ನಗಲಿಂದಲೇ ಬೊಜ್ಜು ಸಮಸ್ಯೆ ನಿವಾರಿಸಬಹುದು. ಮೊದಲು ಆಹಾರದಲ್ಲಿ ಕಡಿಮೆ ಪ್ರಮಾಣದ ಎಣ್ಣೆ ಬಳಸುವಂತೆ ಅವರು ಜನರಿಗೆ ಸಲಹೆ ನೀಡಿದ್ದಾರೆ.

ನೀವು ಆಹಾರದಲ್ಲಿ ಬಳಕೆ ಮಾಡುವ ಎಣ್ಣೆಯ ಪ್ರಮಾಣವನ್ನು ಶೇ. 10ರಷ್ಟು ಕಡಿಮೆ ಮಾಡಿ, ನೀವು ಅಡುಗೆ ಎಣ್ಣೆಯನ್ನು ಕೊಂಡುಕೊಳ್ಳುವಾಗಲೇ ಶೇ.10ರಷ್ಟು ಕಡಿಮೆ ಕೊಂಡುಕೊಳ್ಳಿ ಎಂದು ಸಲಹೆ ನೀಡಿದರು.

10 ಜನರು ಈ ಒಂದು ಮಾರ್ಗವನ್ನು ಅನುಸರಿಸಿ ಆ ಹತ್ತು ಜನರಲ್ಲಿ ಒಬ್ಬಬ್ಬರೂ 10 ಜನರಿಗೆ ಮಾರ್ಗದರ್ಶನ ನೀಡಿ ಎಂದು ಹೇಳಿದ್ದಾರೆ.

ಜನರು ಆರೋಗ್ಯಕರ ಜೀವನ ಶೈಲಿ ಅಳವಡಿಸಿಕೊಳ್ಳುವಂತೆ ಇರುವ ಡಬಲ್ ಒಲಿಂಪಿಕ್ ಪದಕ ವಿಜೇತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮತ್ತು ಬಾಕ್ಸಿಂಗ್ ಚಾಂಪಿಯನ್ ನಿಖತ್ ಜರೀನ್ ಅವರ ಸಂದೇಶಗಳನ್ನು ಮೋದಿ ನುಡಿದರು.

ಡೆಹ್ರಾಡೂನ್‌ನಲ್ಲಿ ರಾಷ್ಟ್ರೀಯ ಕ್ರೀಡಾಕೂಟದ ಉದ್ಘಾಟನೆಯ ಸಂದರ್ಭದಲ್ಲಿ ಬಹಳ ಮುಖ್ಯವಾದ ವಿಷಯ ಪ್ರಸ್ತಾಪಿಸಿದ್ದೆ. ಅದು ದೇಶದಲ್ಲಿ ಹೊಸ ಚರ್ಚೆಯನ್ನು ಪ್ರಾರಂಭಿಸಿದೆ. ಅದು ಬೊಜ್ಜಿನ ವಿಚಾರವಾಗಿದೆ. ಪಿಟ್ ಮತ್ತು ಆರೋಗ್ಯ ರಾಷ್ಟ್ರವಾಗಲು ಬೊಜ್ಜಿನ ಸಮಸ್ಯೆಯಿಂದ ಮುಕ್ತಿ ಹೊಂದಬೇಕಾಗಿದೆ ಎಂದು ಮೋದಿ ಹೇಳಿದರು.

ಅಧ್ಯಯನವೊಂದರ ಪ್ರಕಾರ ಎಂಟು ಜನರಲ್ಲಿ ಒಬ್ಬರು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳೆದ ವರ್ಷಗಳಲ್ಲಿ ಸ್ಥೂಲಕಾಯದ ಪ್ರಕರಣಗಳು ದ್ವಿಗುಣಗೊಂಡಿವೆ. ನ್ನೂ ಹೆಚ್ಚು ಆತಂಕಕಾರಿ ಸಂಗತಿಯೆಂದರೆ ಸ್ಥೂಲಕಾಯದ ಸಮಸ್ಯೆ ಮಕ್ಕಳಲ್ಲಿ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ಹೇಳಿದರು.

2022ರ ವಿಶ್ವ ಆರೋಗ್ಯ ಸಂಸ್ಥೆ ದತ್ತಾಂಶದ ಪ್ರಕಾರ ವಿಶ್ವದಾದ್ಯಂತ ಸುಮಾರು 250 ಕೋಟಿ ಜನರು ಅಧಿಕ ತೂಕವನ್ನು ಹೊಂದಿರುವುದನ್ನು ತೋರಿಸುತ್ತದೆ. ಅಂದರೆ ಅವರು ಅಗತ್ಯಕ್ಕಿಂತ ಹೆಚ್ಚು ತೂಕವನ್ನು ಹೊಂದಿದ್ದಾರೆ. ಈ ಅಂಕಿಅಂಶಗಳು ತುಂಬಾ ಗಂಭೀರವಾಗಿದ್ದು, ಇದು ಏಕೆ ಉಂಟಾಗುತ್ತಿದೆ ಎಂಬುದರತ್ತ ಯೋಚಿಸುವಂತೆ ಮಾಡಿದೆ. ಅಧಿಕ ತೂಕ ಅಥವಾ ಬೊಜ್ಜು ಅನೇಕ ರೀತಿಯ ಸಮಸ್ಯೆಗಳು ಮತ್ತು ರೋಗಗಳಿಗೆ ಕಾರಣವಾಗುತ್ತದೆ. ಸಣ್ಣ ಪ್ರಯತ್ನಗಳಿಂದ ಈ ಸವಾಲನ್ನು ನಿಭಾಯಿಸಬಹುದು ಎಂದು ಮೋದಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!