ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚಾಂಪಿಯನ್ಸ್ ಟ್ರೋಫಿಯ ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ 241 ರನ್ ಗೆ ಆಲೌಟ್ ಆಗಿದ್ದು, ಭಾರತಕ್ಕೆ ಗೆಲ್ಲಲು 242 ರನ್ ಗಳ ಗುರಿ ನೀಡಿದೆ.
ದುಬೈನ ದುಬೈ ಅಂತಾರಾಷ್ಚ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.
ಆರಂಭಿಕರಾಗಿ ಕಣಕ್ಕಿಳಿದ ಬಾಬರ್ ಆಜಂ (23 ರನ್) ಮತ್ತು ಇಮಾಮ್ ಉಲ್ ಹಕ್ (10 ರನ್) ಉತ್ತಮ ಆರಂಭ ನೀಡಿದರಾದರೂ ಇಬ್ಬರೂ ಬೇಗನೆ ಪೆವಿಲಿಯನ್ ಸೇರಿಕೊಂಡರು.
ಬಳಿಕ ಕ್ರೀಸ್ ಗೆ ಬಂದ ಸೌದ್ ಶಕೀಲ್ (62 ರನ್) ಮತ್ತು ನಾಯಕ ಮಹಮದ್ ರಿಜ್ವಾನ್ (46 ರನ್) ರಕ್ಷಣಾತ್ಮಕ ಆಟದ ಮೊರೆ ಹೋದರು. ಪರಿಣಾಮ ಈ ಜೋಡಿ 3ನೇ ವಿಕೆಟ್ ಗೆ 104 ರನ್ ಗಳ ಜೊತೆಯಾಟವಾಡಿದರು.ಸೌದ್ ಶಕೀಲ್ ಅರ್ಧಶತಕ ಸಿಡಿಸಿದರೆ, ರಿಜ್ವಾನ್ ಅಕ್ಸರ್ ಪಟೇಲ್ ಬೌಲಿಂಗ್ ನಲ್ಲಿ ಬೌಲ್ಡ್ ಆದರು. ಬಳಿಕ ಸೌದ್ ಶಕೀಲ್ ಕೂಡ ಹಾರ್ದಿಕ್ ಪಾಂಡ್ಯಾಗೆ ವಿಕೆಟ್ ಒಪ್ಪಿಸಿದರು.
ಈ ಇಬ್ಬರು ಔಟಾದ ಬಳಿಕ ಪಾಕಿಸ್ತಾನ ಬ್ಯಾಟಿಂಗ್ ಬಳಗ ಎಡವಿದ್ದು, ಮೂಡಿಬರಲಿಲ್ಲ. ಅಂತಿಮವಾಗಿ 49.4 ಓವರ್ ನಲ್ಲಿ ಪಾಕಿಸ್ತಾನ 241 ರನ್ ಗಳಿಗೆ ಆಲೌಟ್ ಆಯಿತು.
ಭಾರತದ ಪರ ಕುಲದೀಪ್ ಯಾದವ್ 3, ಹಾರ್ದಿಕ್ ಪಾಂಡ್ಯಾ 2, ಹರ್ಷಿತ್ ರಾಣಾ, ಅಕ್ಸರ್ ಪಟೇಲ್ ಮತ್ತು ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದರು.