ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶದ ಪ್ರಮಾಣವು ಸಾಮಾನ್ಯಕ್ಕಿಂತ 2ರಿಂದ 4 ಡಿಗ್ರಿ ಸೆಲ್ಸಿಯಸ್ ಹಾಗೂ ದಕ್ಷಿಣ ಒಳನಾಡಿನಲ್ಲಿ 1ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.