Tuesday, January 27, 2026
Tuesday, January 27, 2026
spot_img

ವಿನಯ್ ಕುಲಕರ್ಣಿಗೆ ಬಿಗ್‌ಶಾಕ್‌, ಜಾಮೀನು ಅರ್ಜಿ ವಜಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ ಗೌಡ ಮರ್ಡರ್‌ ಕೇಸ್‌ನಲ್ಲಿ ಜೈಲು ಸೇರಿದ್ದ ಶಾಸಕ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

ಜ.9 ರಂದು ಅರ್ಜಿ ವಿಚಾರಣೆ ವೇಳೆ ವಿನಯ್ ಕುಲಕರ್ಣಿ ಪರವಾಗಿ ವಾದಿಸಿದ್ದ ಹಿರಿಯ ವಕೀಲ ಸಿ.ವಿ ನಾಗೇಶ್, ಕೊಲೆ ಪ್ರಕರಣದಲ್ಲಿ ಅರ್ಜಿದಾರರ ಯಾವುದೇ ಪಾತ್ರವಿಲ್ಲ. ಕೊಲೆಯಾದ ಸ್ಥಳದಲ್ಲಿಯೂ ಹಾಜರಿರಲಿಲ್ಲ. ಪ್ರಕರಣದ ಇತರೆ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಜಾಮೀನು ಷರತ್ತುಗಳನ್ನ ಉಲ್ಲಂಘಿಸುವುದಕ್ಕೆ ಸಾಕಷ್ಟು ವ್ಯತ್ಯಾಸವಿದೆ ಎಂದು ವಾದಿಸಿದ್ದರು.

ಸಿಬಿಐ ಪರವಾಗಿ ವಾದ ಮಂಡಿಸಿದ್ದ ವಕೀಲ ಪ್ರಸನ್ನ ಕುಮಾರ್, ಜಾಮೀನು ವೇಳೆ ಎಲ್ಲ ಷರತ್ತಿಗೆ ಒಪ್ಪಿ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಈಗ ಅವುಗಳನ್ನ ಉಲ್ಲಂಘಿಸಿದ್ದಾರೆ. ಷರತ್ತು ಉಲ್ಲಂಘನೆಯಾಗಿದ್ದು, ಜಾಮೀನು ಪಡೆಯುವುದಕ್ಕೆ ಅರ್ಹರಲ್ಲ ಎಂದು ವಾದಿಸಿದ್ದರು. ವಾದ ಆಲಿಸಿದ್ದ ಹೈಕೋರ್ಟ್ ಆದೇಶವನ್ನು ಇಂದು (ಜ.27) ಪ್ರಕಟಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !