ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದ ವಾಯುಪಡೆ ನೆಲೆಯ ಮೇಲೆ ಅಲ್ಲಿನ ನಿವಾಸಿಗಳ ಗುಂಪೊಂದು ಸೋಮವಾರ ದಾಳಿ ನಡೆಸಿದೆ.
ಕಾಕ್ಸ್ ಬಜಾರ್ನಲ್ಲಿರುವ ವಾಯುಪಡೆ ನೆಲೆಯ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ, ಈ ವೇಳೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ ಎಂದು ಮಿಲಿಟರಿ ಹೇಳಿಕೆಯಲ್ಲಿ ಆರೋಪಿಸಿದೆ.
ಬಂಗಾಳಿ ಭಾಷೆಯ ಪ್ರೋಥೋಮ್ ಅಲೋ ಪತ್ರಿಕೆಯ ಪ್ರಕಾರ, ಮೋಟಾರ್ಬೈಕ್ನಲ್ಲಿದ್ದ ವ್ಯಕ್ತಿಯೊಬ್ಬ ಹೆಲ್ಮೆಟ್ ಧರಿಸದಿದ್ದಕ್ಕಾಗಿ ವಾಯುಪಡೆಯ ಸೈನಿಕರು ಆತನನ್ನು ತಡೆದಿದ್ದರ ಪರಿಣಾಮ ವಾಗ್ವಾದದ ನಡೆದಿತ್ತು. ಈ ಬಳಿಕ ಹಿಂಸಾಚಾರ ಭುಗಿಲೆದ್ದಿತು. ಆ ವ್ಯಕ್ತಿಯ ಸಂಬಂಧಿಕರು ಮತ್ತು ನೆರೆಹೊರೆಯವರು ಬಂದು ವಾಯುನೆಲೆಯ ಮೇಲೆ ದಾಳಿ ಮಾಡಲು ಪ್ರಾರಂಭಿಸಿದರು ಎಂದು ವರದಿ ತಿಳಿಸಿದೆ.