ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧಿಸಲಾಗಿದೆ.
ಫೆಬ್ರವರಿ 25 ರಿಂದ ಮಾರ್ಚ್ 1ರವರೆಗೆ ಐದು ದಿನಗಳ ಕಾಲ ಮಹದೇಶ್ವರಬೆಟ್ಟಕ್ಕೆ ದ್ವಿಚಕ್ರ, ಆಟೋ ರಿಕ್ಷಾ, ಗೂಡ್ಸ್ ವಾಹನ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
ಫೆಬ್ರವರಿ 26ರ ಮಹಾಶಿವರಾತ್ರಿಯಂದು ಮಲೆಮಹದೇಶ್ವರನಿಗೆ ಎಣ್ಣೆ ಮಜ್ಜನ ಸೇವೆ ನಡೆಯಲಿದ್ದು, ರಾತ್ರಿಯಿಡಿ ಜಾಗರಣೆ, ಉತ್ಸವ, ವಿಶೇಷ ಅಭಿಷೇಕ, ಪೂಜೆ-ಪುನಸ್ಕಾರಗಳು ನಡೆಯಲಿವೆ. ಫೆಬ್ರವರಿ 27 ರಂದು ವಿಶೇಷ ಸೇವೆ ಉತ್ಸವಾಧಿಗಳು, 28 ರಂದು ಅಮಾವಾಸ್ಯೆ ಪೂಜೆ ಮತ್ತು ಮಾರ್ಚ್ 1 ರಂದು ಮಹಾ ರಥೋತ್ಸವ ಜರುಗಲಿದೆ.