ಹೆಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ: ಲೋಕಾಯುಕ್ತ ಬಿ-ರಿಪೋರ್ಟ್ ರದ್ದು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್;

ಡಿನೋಟಿಫಿಕೇಷನ್ ಪ್ರಕರಣದಲ್ಲಿ ಲೋಕಾಯುಕ್ತದಿಂದ ಸಲ್ಲಿಕೆಯಾಗಿದ್ದ ಬಿ ರಿಪೋರ್ಟ್ ರದ್ದುಗೊಳಿಸಲು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಹೆಚ್.ಡಿ ಕುಮಾರಸ್ವಾಮಿ ಅವರು ಜೂನ್ 2006ರಿಂದ ಅಕ್ಟೋಬರ್ 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಡಿನೋಟಿಫಿಕೇಷನ್ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ಈ ಕೇಸ್ ವಿಚಾರಣೆ ನಡೆಸಿದ್ದ ಹೈಕೋರ್ಟ್ ಲೋಕಾಯುಕ್ತದಿಂದ ಸಲ್ಲಿಸಿದ್ದಂತ ಬಿ-ರಿಪೋರ್ಟ್ ಅನ್ನು ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೆಚ್.ಡಿ ಕುಮಾರಸ್ವಾಮಿ ಅವರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಇಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಂಕರ್ ದತ್ತ, ರಾಜೇಶ್ ಬಿಂದಾರ್ ಅವರಿದ್ದ ನ್ಯಾಯಪೀಠವು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಲೋಕಾಯುಕ್ತ ಬಿ-ರಿಪೋರ್ಟ್ ರದ್ದುಕೋರಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!