ಹೊಸದಿಗಂತ ವರದಿ, ವಿಜಯಪುರ:
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಜಿಲ್ಲೆ ಚಡಚಣ ಪಟ್ಟಣದ ಯಾತ್ರಾರ್ಥಿಗಳಿಬ್ಬರು ಗುಜರಾತ್ ರಾಜ್ಯದ ಪೋರ್ ಬಂದರ್ ಸಮೀಪ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಮೃತಪಟ್ಟ ವ್ಯಕ್ತಿಗಳನ್ನು ಚಡಚಣ ಪಟ್ಟಣದ ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗಿ (40) ಎಂದು ಗುರುತಿಸಲಾಗಿದೆ.
ಚಾಲಕ ಸಮೇತ ಒಟ್ಟು 17 ಮಂದಿ ಪ್ರಯಾಣಿಸುತ್ತಿದ್ದ ಮ್ಯಾಕ್ಸಿ ಕ್ಯಾಬ್ ನಲ್ಲಿ ನಾಲ್ವರು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳಿಗೆ ಪೋರ್ ಬಂದರ್ ನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚಾಲಕ ನಿದ್ದೆ ಮಂಪರಿನಲ್ಲಿದ್ದಾಗ, ನಿಂತಿದ್ದ ಟಿಪ್ಪರಗೆ ಡಿಕ್ಕಿಯಾದ ಹಿನ್ನೆಲೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.