ಹೊಸದಿಗಂತ ವರದಿ ಮಂಡ್ಯ :
ಮಹಿಳೆಯೊಬ್ಬಳು ಅನುಮಾನಾಸ್ಪವಾಗಿ ಸಾವನ್ನಪ್ಪಿರುವ ಘಟನೆ ನಗರದ ಆನೆಕೆರೆ ಬೀದಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.
ಆನೆಕೆರೆ ಬೀದಿಯ ಬೋರೇಗೌಡ ಎಂಬಾತನ ಪತ್ನಿ ಹೇಮಾ (42) ಎಂಬಾಕೆಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದವಳಾಗಿದ್ದು, ಈಕೆಯನ್ನು ಹತ್ಯೆ ಮಾಡಿ ನಂತರ ನೇಣು ಬಿಗಿದಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
ಸುದ್ಧಿ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ವಿ.ಜೆ. ಶೋಭರಾಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವವನ್ನು ಜಿಲ್ಲಾ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಂದ ನಂತರವಷ್ಟೇ ಸತ್ಯಾಂಶ ತಿಳಿಯಲಿದೆ.
ಈ ಸಂಬಂಧ ಸೆಂಟ್ರಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.



