Wednesday, January 28, 2026
Wednesday, January 28, 2026
spot_img

WEATHER | ಮಳೆ ಮಾಯ, ಚಳಿ ಕಾಯಂ: ರಾಜ್ಯದಲ್ಲಿ ಮತ್ತೆ ಒಣಹವೆಯ ಅಬ್ಬರ!

ಕಳೆದ ಎರಡು ದಿನಗಳ ಹಿಂದೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಕಾಣಿಸಿಕೊಂಡಿದ್ದ ದಿಢೀರ್ ಮಳೆ ಮತ್ತು ಮೋಡ ಕವಿದ ವಾತಾವರಣಕ್ಕೆ ಈಗ ವಿರಾಮ ಬಿದ್ದಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ರಾಜ್ಯದಾದ್ಯಂತ ಮತ್ತೆ ಶುಷ್ಕ ವಾತಾವರಣ ತಲೆದೂಗಿದ್ದು, ಚಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರು ಹಾಗೂ ದಕ್ಷಿಣ ಒಳನಾಡು: ಬೆಂಗಳೂರಿನಲ್ಲಿ ಮುಂಜಾನೆ ಮಂಜು ಮುಸುಕಿದ ವಾತಾವರಣ ಇರಲಿದ್ದು, ತೀವ್ರ ಚಳಿ ಇರಲಿದೆ. ಮೈಸೂರು, ಹಾಸನ, ಕೊಡಗು ಸೇರಿದಂತೆ ದಕ್ಷಿಣದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಶುಷ್ಕ ಗಾಳಿ ಬೀಸಲಿದೆ.

ಬೆಳಗಾವಿ, ಬೀದರ್, ಕಲಬುರಗಿ ಹಾಗೂ ಧಾರವಾಡದಂತಹ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಇರುವ ಒಣಹವೆಯ ಸ್ಥಿತಿಯೇ ಇಂದೂ ಮುಂದುವರಿಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !