ಪುಣೆಯ ಬಸ್‌ಸ್ಟಾಂಡ್‌ನಲ್ಲಿ ರೇಪ್‌: 75 ಗಂಟೆಗಳ ಬಳಿಕ ಕಾಮುಕ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ಸಿನಲ್ಲಿ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ. ಸುಮಾರು 75 ಗಂಟೆಗಳ ಕಾಲ ಆತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿ, ಶ್ರೀರೂರ್ ತಹಸಿಲ್‌ನಿಂದ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿ ಮಂಗಳವಾರ ಬೆಳಿಗ್ಗೆ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ. ಆತ ಆರಂಭದಲ್ಲಿ ಮಹಳೆಯನ್ನು ಅಕ್ಕ ಎಂದು ಕರೆದು ಮಾತಾಡಿಸಿದ್ದ.

ಬಳಿಕ ಸತಾರಾಕ್ಕೆ ಹೋಗುವ ಬಸ್ ಮತ್ತೊಂದು ಪ್ಲಾಟ್‌ಫಾರ್ಮ್‌ಗೆ ಬಂದಿದೆ ಎಂದು ಹೇಳಿ, ನಿಲ್ಲಿಸಿದ್ದ ಖಾಲಿ ಬಸ್‌ ಬಳಿ ಕರೆದೊಯ್ದಿದ್ದ. ಮಹಿಳೆ ಬಸ್ಸಿನೊಳಗೆ ಲೈಟ್‌ ಆನ್‌ ಇರದ ಕಾರಣ ಬಸ್‌ ಹತ್ತಲು ಹಿಂಜರಿದಿದ್ದಳು. ಈ ವೇಳೆ, ಇದೇ ಸರಿಯಾದ ಬಸ್‌ ಎಂದು ಹೇಳಿ ಒಳಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!