Wednesday, January 28, 2026
Wednesday, January 28, 2026
spot_img

ಫೆ.1ರ ಮೇಲೆ ದೇಶದ ಕಣ್ಣು: ರಾಷ್ಟ್ರಪತಿ ಭಾಷಣದೊಂದಿಗೆ ಇಂದಿನಿಂದ ಬಜೆಟ್ ಸಮರ ಆರಂಭ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ಸಂಸತ್ತಿನ ಮಹತ್ವದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಬಾರಿಯ ಅಧಿವೇಶನವು ಒಟ್ಟು 30 ಕಲಾಪಗಳನ್ನು ಒಳಗೊಂಡಿರಲಿದ್ದು, ಎರಡು ಹಂತಗಳಲ್ಲಿ ನಡೆಯಲಿದೆ.

ಅಧಿವೇಶನದ ವೇಳಾಪಟ್ಟಿ

ಮೊದಲ ಹಂತ: ಜನವರಿ 28 ರಿಂದ ಫೆಬ್ರವರಿ 13.

ಎರಡನೇ ಹಂತ: ಮಾರ್ಚ್ 9 ರಿಂದ ಏಪ್ರಿಲ್ 2.

ಆರ್ಥಿಕ ಸಮೀಕ್ಷೆ: ಜನವರಿ 31 ರಂದು ಮಂಡನೆ.

ಕೇಂದ್ರ ಬಜೆಟ್: ಫೆಬ್ರವರಿ 1 ರಂದು ಬೆಳಿಗ್ಗೆ 11 ಗಂಟೆಗೆ.

ಅಧಿವೇಶನ ಸುಗಮವಾಗಿ ನಡೆಯುವ ನಿಟ್ಟಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಈಗಾಗಲೇ ಸರ್ವಪಕ್ಷ ಸಭೆ ನಡೆದಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತವಾಗಿ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಬರೆಯಲಿದ್ದಾರೆ.

ಬಜೆಟ್ ಅಧಿವೇಶನಕ್ಕೆ ಕಾಂಗ್ರೆಸ್ ಸಂಪೂರ್ಣ ಸಿದ್ಧತೆ ನಡೆಸಿದೆ. ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ಕೆಳಗಿನ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ:

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಮಸೂದೆ.

ಪರಿಸರ ಸಮಸ್ಯೆಗಳು ಮತ್ತು ಎಸ್‌ಐಆರ್ ವಿಷಯಗಳು.

ವಿಬಿ ಜಿ ರಾಮ್ ಜಿ ಕಾಯ್ದೆಯ ಕುರಿತಾದ ಚರ್ಚೆ.

ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಬೆಳಿಗ್ಗೆ ವಿರೋಧ ಪಕ್ಷಗಳ ಜಂಟಿ ಕಾರ್ಯತಂತ್ರವನ್ನು ಅಂತಿಮಗೊಳಿಸಲು ಮತ್ತೊಂದು ಪ್ರಮುಖ ಸಭೆ ಕರೆದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !