ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಬೊಲಿವಿಯಾದಲ್ಲಿ ಎರಡು ಬಸ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 37 ಜನರು ಸಾವನ್ನಪ್ಪಿದ್ದು, 39 ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಉಯುನಿ ಮತ್ತು ಕೊಲ್ಚಾನಿ ನಗರಗಳ ನಡುವಿನ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಉಯುನಿ ಪಟ್ಟಣದ ನಾಲ್ಕು ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತಪಟ್ಟವರನ್ನು ಮತ್ತು ಗಾಯಗೊಂಡವರನ್ನು ಗುರುತಿಸುವ ಕೆಲಸವನ್ನು ಪೊಲೀಸ್ ಸಿಬ್ಬಂದಿ ಮಾಡುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.