ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿನಿಮಾ ನಟರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಾರ್ನಿಂಗ್ ಕೊಟ್ಟ ವಿಚಾರಕ್ಕೆ ಜೆಡಿಎಸ್ ವಾಗ್ದಾಳಿ ನಡೆಸಿದೆ. ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಜೆಡಿಎಸ್ ವಿನಾಶ ಕಾಲೇ ವಿಪರೀತ ಬುದ್ಧಿ ಎಂದು ಪೋಸ್ಟ್ ಹಾಕಿ ಕಿಡಿಕಾರಿದೆ.
ವಿನಾಶ ಕಾಲೇ ವಿಪರೀತ ಬುದ್ಧಿ. ರೌಡಿ ಕೊತ್ವಾಲನ ಶಿಷ್ಯ ಡಿಕೆಶಿ ನಡೆದು ಬಂದ ದಾರಿ, ಬೆಳೆದು ಬಂದ ಪರಿಸರ, ಜೊತೆಗಿದ್ದವರ ಸಹವಾಸವೇ ಅಂತಹದ್ದು. ನಿಮ್ಮ ಪಾದಯಾತ್ರೆ ರಾಜಕೀಯ ಪ್ರೇರಿತವಾಗಿತ್ತು. ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಭಾಗವಹಿಸಲಿಲ್ಲ ಎಂದು ಬೆದರಿಕೆ ಹಾಕಿರುವುದು ಖಂಡನೀಯ ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.