ಸೆಮಿ ಫೈನಲ್‌ ಪ್ರವೇಶಿದ ಟೀಮ್ ಇಂಡಿಯಾ, ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. ಇಂದು ನಡೆದ ಕೊನೆಯ ಪಂದ್ಯದಲ್ಲಿ ಭಾರತ ತಂಡ, ನ್ಯೂಜಿಲೆಂಡ್ ತಂಡವನ್ನು 44 ರನ್‌ಗಳಿಂದ ಸೋಲಿಸಿದೆ.

ಇದರೊಂದಿಗೆ, ಟೀಂ ಇಂಡಿಯಾ ಟೂರ್ನಿಯಲ್ಲಿ ಸತತ ಮೂರು ಗೆಲುವುಗಳನ್ನು ಸಾಧಿಸುವ ಮೂಲಕ ತನ್ನ ಗುಂಪಿನಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 249 ರನ್‌ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್‌ 45.3 ಓವರ್‌ಗಳಲ್ಲಿ 205 ರನ್‌ಗಳಿಗೆ ಆಲೌಟ್‌ ಆಯ್ತು.

ಇದೀಗ ಮಂಗಳವಾರ ನಡೆಯುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ, ಆಸ್ಟ್ರೇಲಿಯಾ ತಂಡ ಮುಖಾಮುಖಿಯಾಗಲಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!