ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೇಸಿಗೆಯ ತೀವ್ರ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಹೆಚ್ಚು ನೀರು ಕುಡಿಯುವುದು, ತಿಳಿ ಬಣ್ಣದ ಬಟ್ಟೆ ಧರಿಸುವುದು, ಬಿಸಿಲಿನಿಂದ ರಕ್ಷಣೆ ಪಡೆಯುವುದು ಮುಂತಾದ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಸಲಹೆ ನೀಡಲಾಗಿದೆ.
ರಾಜ್ಯದಲ್ಲಿ ಬಿಸಿಗಾಳಿ ಹೆಚ್ಚಳವಾಗುತ್ತಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಹೆಚ್ಚು ನೀರು ಕುಡಿಯುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಹೆಚ್ಚು ನೀರಿನಂಶ ಹೊಂದಿರುವ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಎಳನೀರು ಹೆಚ್ಚಾಗಿ ಸೇವಿಸಿ. ಬಿಸಿಲು ಬೀಳದಂತೆ ಶರೀರವನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು ಹಾಗಾಗಿ ತಿಳಿ ಬಣ್ಣದ, ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ. ಮನೆಯಲ್ಲಿಯೇ ಸಿದ್ಧಪಡಿಸಿದ ನಿಂಬೆ ಹಣ್ಣಿನ ಜ್ಯೂಸ್, ಮಜ್ಜಿಗೆ, ಹಣ್ಣಿನ ಜ್ಯೂಸ್‌ಗಳನ್ನು ಸೇವಿಸುವುದು ಬೆಸ್ಟ್ ಎಂದು ತಿಳಿಸಿದೆ.