ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಸಕ್ತ ಸಾಲಿನ ಬಜೆಟ್ ಮೇಲೆ ದೊಡ್ಡ ಮಟ್ಟದ ನಿರೀಕ್ಷೆಯಿಲ್ಲ. ಗ್ಯಾರಂಟಿ ಹೆಸರಿನಲ್ಲಿ ಜನರ ಮೇಲೆ ಮತ್ತೆ ಒಂದೂವರೆ ಲಕ್ಷ ಕೋಟಿ ಸಾಲ ಆಗದಿರಲಿ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕಾರ್ಯಕ್ರಮಗಳೇ ದೊಡ್ಡದು ಎಂದು ಬಿಂಬಿಸಿ ಬೇರೆ ಕಾರ್ಯಕ್ರಮಗಳನ್ನ ನಿಲ್ಲಿಸಿದ್ದಾರೆ. ಕಳೆದ ಬಜೆಟ್‌ನಲ್ಲಿ ಕೆಕೆಆರ್‌ಡಿಬಿಗೆ 5 ಸಾವಿರ ಕೋಟಿ ರೂ. ಘೋಷಣೆ ಮಾಡಿದ್ದು, ಈ ವರ್ಷ ಒಂದೂ ಬಿಡಿಗಾಸೂ ಬಿಡುಗಡೆ ಮಾಡಿಲ್ಲ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಸಂಪೂರ್ಣವಾಗಿ ಸ್ಥಗಿತಗೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಎಸ್ಸಿ-ಎಸ್ಟಿ ಸಮುದಾಯಗಳಿಗೆ ನಿಗದಿಯಾಗಿರುವ ಹಣ ಖರ್ಚು ಮಾಡದೇ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು, ಜೈಲಿಗೆ ಕಳುಹಿಸಬೇಕು ಎಂಬ ಕಾನೂನುಗಳನ್ನು ತಂದವರು, ಗ್ಯಾರಂಟಿಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶೀಷ್ಟ ಪಂಗಡಗಳ ಅನುದಾನ ಬಳಸಿಕೊಂಡರೆ ಆ ಕಾನೂನುಗಳನ್ನು ಇಟ್ಟುಕೊಂಡು ಏನು ಮಾಡುತ್ತೀರಿ? ಎಂದು ಪ್ರಶ್ನಿಸಿದರು.