ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರಶ್ಮಿಕಾ ಮಂದಣ್ಣ ಕನ್ನಡದವರು ಎಂದು ಹೇಳಿಕೊಳ್ಳೋದಿಲ್ಲ. ಕರ್ನಾಟದಲ್ಲಿ ಇದ್ದೇನೆ ಎಂದು ಹೇಳೋದಿಲ್ಲ. ಕನ್ನಡದ ಯಾವುದೇ ಕಾರ್ಯಕ್ರಮಕ್ಕೆ ಆಹ್ವಾನ ಕೊಟ್ಟರೆ ಟೈಮ್ ಇಲ್ಲ ಬರೋದಿಲ್ಲ ಎನ್ನುತ್ತಾರೆ ಎಂದು ಶಾಸಕ ಗಣಿಗ ರವಿಕುಮಾರ ಗರಂ ಆಗಿದ್ದಾರೆ.
ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು. ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದವರು. ಅವರನ್ನು ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನ ಮಾಡಿದ್ವಿ. ಆದರೆ ನಾನು ಹೈದರಾಬಾದ್ನಲ್ಲಿ ಇರೋದು, ನನಗೆ ಟೈಂ ಇಲ್ಲ, ಬರಲ್ಲ ಎಂದು ಹೇಳಿದ್ದರು. ಇವರಿಗೆ ಬುದ್ದಿ ಕಲಿಸಬೇಕಲ್ವಾ? ಎಂದು ಕೆಂಡಕಾರಿದರು