ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ತಿನಲ್ಲಿ ಹೆಚ್ಚಿನ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ರಾಜ್ಯದ ದಂಪತಿಗಳು ಸಾಧ್ಯವಾದಷ್ಟು ಬೇಗ ಮಕ್ಕಳನ್ನ ಮಾಡಿಕೊಳ್ಳಿ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮನವಿ ಮಾಡಿದ್ದಾರೆ.
ಈ ಹಿಂದೆ ನಾವು ಕಡಿಮೆ ಮಕ್ಕಳನ್ನು ಹೆರಬೇಕೆಂದು ಹೇಳುತ್ತಿದ್ದೆವು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಕೇಂದ್ರ ಸರ್ಕಾರ ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣೆ ಮಾಡಿದರೆ, ತಮಿಳುನಾಡಿನಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆ ಮತ್ತು ಸಂಸತ್ತಿನಲ್ಲಿ ರಾಜ್ಯದ ಪ್ರಾತಿನಿಧ್ಯ ಕಡಿಮೆಯಾಗಬಹುದು ಎಂದು ಹೇಳಿದ್ದಾರೆ.