ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಖಂಡಿತ: ಬಿ.ವೈ.ವಿಜಯೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಗಾದಿಗೆ ಪೈಪೋಟಿ ನಡೆಯುತ್ತಿದ್ದು, ದಿನೇದಿನೇ ಅದು ದೊಡ್ಡದಾಗುತ್ತಿದೆ. ಪರ-ವಿರುದ್ಧ ಹೇಳಿಕೆಗಳನ್ನು ಶಾಸಕರು ಕೊಡುತ್ತಿದ್ದಾರೆ. ಬರುವ ದಿನಗಳಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುವುದರಲ್ಲಿ ಸಂದೇಹವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!