ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನ ಸಭೆ ಅಧಿವೇಶನದಲ್ಲಿ ಶಾಸಕರಿಗೆ ಮಧ್ಯಾಹ್ನದ ಭೋಜನದ ಬಳಿಕ ಕಿರುನಿದ್ರೆ ಮಾಡಲು ಸ್ಪೀಕರ್ ಯ ಟಿ ಖಾದರ್ ರಿಕ್ಲೈನರ್ ಚೇರ್ ವ್ಯವಸ್ಥೆಯನ್ನ ಕಲ್ಪಿಸಿದ್ದಾರೆ. ಸದ್ಯ ಈ ಮಸಾಜ್ ಚೇರ್ಗಳನ್ನು ಶಾಸಕರಿಗೆ ಕಲ್ಪಿಸಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.
ರಾಜ್ಯ ಸರ್ಕಾರ ದಿವಾಳಿ ಆಗಿದೆ. ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸರಿಯಾಗಿ ಹಣ ಬಂದಿಲ್ಲ, ಹೊಸ ಹೊಸ ಯೋಜನೆಗಳಿಗೆ ಹಣ ನೀಡುತ್ತಿಲ್ಲ. ಈ ಚೇರ್ ಗಳ ಅವಶ್ಯಕತೆ ಇತ್ತಾ? ಎಂದು ವಿರೋಧ ಪಕ್ಷದ ನಾಯಕರು ಸರ್ಕಾರದ ವಿರುದ್ಧ ವಗ್ದಾಳಿ ನಡೆಸುತ್ತಿದ್ದಾರೆ.
ಈ ಕುರಿತು ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯೆ ನೀಡಿದ್ದು, ರಿಕ್ಲೈನರ್ ಚೇರ್ಗಳನ್ನು ಖರೀದಿ ಮಾಡುವುದಿಲ್ಲ. ಯಾಕೆಂದರೆ ವರ್ಷಪೂರ್ತಿ ಅಧಿವೇಶನ ನಡೆಯುವುದಿಲ್ಲ. ವಿಧಾನಸೌಧದಲ್ಲಿ ವರ್ಷಕ್ಕೆ ಕೇವಲ 30 ದಿನಗಳ ಕಲಾಪ ನಡೆಯುತ್ತೆ. ಹೀಗಾಗಿ ಅವುಗಳನ್ನು ಬಾಡಿಗೆಗೆ ಪಡೆಯಲಾಗಿದೆ ಎಂದರು.