ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೃಹ ಲಕ್ಷ್ಮೀ ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಫಲಾನುಭವಿಗಳಿಗೆ ಹಣ ತಲುಪುವುದು ಸ್ವಲ್ಪ ವಿಳಂಬವಾಗಿತ್ತು. ಈಗ ಎಲ್ಲವೂ ಸರಿಯಾಗಿದ್ದು, ಇದೀಗ ಎರಡು ತಿಂಗಳ ಬಾಕಿ ಹಣ ಬಿಡುಗಡೆಯಾಗಲಿದೆ. ಈ ಬಗ್ಗೆ ಅನಗತ್ಯ ಗೊಂದಲ ಬೇಡ. ಐದು ವರ್ಷವೂ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿ ಬಗ್ಗೆ ಬಿಜೆಪಿಯವರ ಟೀಕೆಗೆ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್, ಯೋಜನೆಗಳು ಎಷ್ಟು ಜನರಿಗೆ ತಲುಪಿವೆ ಎನ್ನುವುದನ್ನು ಅವರು ಮೊದಲು ಅವಲೋಕನ ಮಾಡಲಿ. ಬಿಜೆಪಿಯವರು ಟೀಕೆ ಮಾಡುವ ಮೊದಲು ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಬೇಕು ಎಂದರು.