ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣದ ಆರೋಪಿ, ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ಬ್ರಿಟಿಷ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಫೆಬ್ರವರಿ 28 ರಂದು ತೀರ್ಪು ಕಾಯ್ದಿರಿಸಿದ್ದರು. ಇಂದು ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.
ED ಪರ ವಕೀಲರು ಮೈಕೆಲ್ ಜಾಮೀನಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.ಆದರೆ ಮೈಕೆಲ್ ಈಗಾಗಲೇ ಸಾಕಷ್ಟು ಸಮಯವನ್ನು ಕಸ್ಟಡಿಯಲ್ಲಿ ಕಳೆದಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಗರಿಷ್ಠ ಏಳು ವರ್ಷ ಜೈಲು ಶಿಕ್ಷೆ ವಿಧಿಸಬಹುದು. ಆದರೆ ಆರೋಪಿ ಈಗಾಗಲೇ 6 ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ. ಹಾಗಾಗಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.
ಇಟಾಲಿಯನ್ ಕಂಪನಿ ಆಗಸ್ಟಾವೆಸ್ಟ್‌ಲ್ಯಾಂಡ್‌ನಿಂದ 12 ವಿವಿಐಪಿ ಹೆಲಿಕಾಪ್ಟರ್‌ಗಳ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ತನಿಖಾ ಸಂಸ್ಥೆಗಳು ಆರೋಪಿಸಿದ್ದವು. ಈ ಹಗರಣದ ಪ್ರಮುಖ ಆರೋಪಿ ಕ್ರಿಶ್ಚಿಯನ್ ಮೈಕೆಲ್ ಅವರನ್ನು ಡಿಸೆಂಬರ್ 4, 2018 ರಂದು ದುಬೈನಲ್ಲಿ ಬಂಧಿಸಿ ಭಾರತಕ್ಕೆ ಕರೆ ತರಲಾಗಿತ್ತು.