ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಾಯಿ ಶಾರದ, ಇಬ್ಬರು ಮಕ್ಕಳಾದ ಅಮೃತ, ಆದರ್ಶ ಸಾವನ್ನಪ್ಪಿದ್ದಾರೆ.
ಪತಿ ಕಿರುಕುಳಕ್ಕೆ ಬೇಸತ್ತು ತಾಯಿ ತನ್ನ ಮಕ್ಕಳ ಜೊತೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿ ಪತಿ ಅಶೋಕನ ಪತ್ತೆಗೆ ಪೊಲೀಸರು ಇದೀಗ ಬಲೆ ಬೀಸಿದ್ದು, ಪ್ರಕರಣ ದಾಖಲಾಗಿದೆ.