ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರ ಬರೋಬ್ಬರಿ 656.07 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿರುವುದು ಇದೀಗ ಬೆಳಕಿಗೆ ಬಂದಿದೆ. ವಿಧಾನ ಪರಿಷತ್ ಕಲಾಪದ ವೇಳೆ ಈ ಬಗ್ಗೆ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೆ ವೆಂಕಟೇಶ್ ಈ ಮಾಹಿತಿ ನೀಡಿದ್ದಾರೆ.
ಒಟ್ಟು 9,04,547 ಫಲಾನುಭವಿ ರೈತರಿಗೆ ಹಾಲು ಉತ್ಪಾದನಾ ಪ್ರೋತ್ಸಾಹಧನ ಬಾಕಿ ಇದೆ. ಪ್ರೋತ್ಸಾಹ ಧನ ನೀಡದೇ ಸರ್ಕಾರ ಸತಾಯಿಸುತ್ತಿದೆ ಎನ್ನಲಾಗದೆ.
ಹಾಲು ಉತ್ಪಾದಕರ ಪ್ರೋತ್ಸಾಹಧನದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಆರ್ಥಿಕ ಇಲಾಖೆ ಹಣ ಬಿಡುಗಡೆ ಮಾಡಬೇಕಿದೆ. ಹಾಲು ಉತ್ಪಾದನೆ ಜಾಸ್ತಿ ಆಗುತ್ತಿದೆ, ಉತ್ಪಾದನೆಗೆ ತಕ್ಕಂತೆ ಅನುದಾನ ಹಂಚಿಕೆ ಇಲ್ಲ ಎಂದು ಕಿಡಿಕಾರಿದ್ದಾರೆ.