ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಜನಪ್ರಿಯ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವಿವಾಹ ಇಂದು ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್ನಲ್ಲಿ ನೆರವೇರಿದೆ. ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹ ನಡೆದಿದೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ವಿ ಸೋಮಣ್ಣ ಸೇರಿದಂತೆ ಅನೇಕ ಬಿಜೆಪಿ ನಾಯಕರು ವಿವಾಹ ಸಮಾರಂಭಕ್ಕೆ ಹಾಜರಾಗಿ ಶುಭ ಹಾರೈಸಿದ್ದಾರೆ.
ಮಾರ್ಚ್ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಭವ್ಯವಾದ ಆರತಕ್ಷತೆ ನಡೆಯಲಿದೆ ಎಂದು ತೇಜಸ್ವಿ ಸೂರ್ಯ ಕುಟುಂಬದ ಮೂಲಗಳು ತಿಳಿಸಿವೆ.