ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಳೇ ಹುಬ್ಬಳ್ಳಿ ಪ್ರಕರಣವನ್ನು ಹಿಂಪಡೆದಿರುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಯುವ ವಕೀಲರ ತಂಡವು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಫೆಬ್ರವರಿ 16 ರಂದು ಸಲ್ಲಿಸಲಾದ ಈ ಅರ್ಜಿಯ ಕುರಿತು ಕಾರಣ ಕೇಳಿ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಮಾರ್ಚ್ 17 ರಂದು ಈ ಅರ್ಜಿಯ ವಿಚಾರಣೆ ನಡೆಯಲಿದೆ.
ಗೀರಿಶ್ ಭಾರದ್ವಾಜ್ ಮತ್ತು ಶ್ರೀಧರ್ ಎನ್ನುವವರಿಂದ ಫೆ 16 ರಂದು ರಿಟ್ ಅರ್ಜಿ ಸಲ್ಲಿಸಿದ್ದರು. ವೆಂಕಟೇಶ ದಳವಾಯಿ ಸರ್ಕಾರದ ವಿರುದ್ಧ ಹೈಕೋರ್ಟ್ನಲ್ಲಿ ವಾದ ಮಂಡಿಸಲಿದ್ದಾರೆ. ಹೈಕೋರ್ಟ್ನಲ್ಲಿ ಮಾರ್ಚ್ 17 ರಂದು ರೀಟ್ ಅರ್ಜಿ ವಿಚಾರಣೆ ನಡೆಸಲಿದೆ. ಹುಬ್ಬಳ್ಳಿ ಸಂಜೀವ್ ಬಡಾಸ್ಕರ ಮತ್ತು ಅಶೋಕ್ ಅಣ್ವೇಕರ್ ತಂಡದಿಂದ ಬೆಂಗಳೂರು ವಕೀಲರಿಗೆ ಸಾಥ್ ನೀಡಲಾಗಿದೆ.
ಈ ಗಲಭೆಯಲ್ಲಿ ಬರೋಬ್ಬರಿ 150 ಕ್ಕೂ ಹೆಚ್ಚು ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಆದರೆ ಇತ್ತೀಚೆಗೆ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಹಳೇ ಹುಬ್ಬಳ್ಳಿ ಗಲಭೇ ಸೇರಿ ಕೆಲ ಕೇಸ್ಗಳನ್ನು ವಾಪಸ್ ಪಡೆಯಲು ನಿರ್ಧಾರ ಮಾಡಿತ್ತು. ಸರ್ಕಾರದ ಈ ನಿರ್ಧಾರದ ವಿರುದ್ದ ರಾಜ್ಯದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಉರಿದುಬಿದಿದ್ದರು. ಹೋರಾಟಕ್ಕೂ ಕರೆ ನೀಡಿದ್ದರು.