ಬಜೆಟ್ ಹಾಳೆಗಳ ಮೇಲಿನ ಲೆಕ್ಕವಲ್ಲ, ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ: ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರುಗಳೊಂದಿಗೆ ಸಭೆ ನಡೆಸಿ, ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಪ್ರಯತ್ನವನ್ನು ಈ ಬಜೆಟ್ ಮೂಲಕ ಮಾಡಿದ್ದೇನೆ ಎಂದು ಸಿಎಂ ಹೇಳಿದ್ದಾರೆ.

ಪ್ರತಿಯೊಬ್ಬ ಪ್ರಜೆಯನ್ನು ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿಯನ್ನಾಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ್ ಮೂಲಕ ಮಾಡಿದ್ದೇನೆ ಎನ್ನುವ ಭರವಸೆ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!