Wednesday, January 28, 2026
Wednesday, January 28, 2026
spot_img

ಬೆಂಗಳೂರು ಪೊಲೀಸರ ಕಾರ್ಯಾಚರಣೆ, ನಾಲ್ಕು ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಡ್ರಗ್ಸ್​ ಸಾಗಾಟ ಮಾಡುತ್ತಿದ್ದ ಕೇರಳ ಮೂಲದ 7 ಜನರು ಸೇರಿ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ.

ಆ ಮೂಲಕ ಅಮೃತಹಳ್ಳಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ. ಜೊತೆಗೆ ಬಂಧಿತರಿಂದ 3 ಕೆಜಿ ಹೈಡ್ರೋ ಗಾಂಜಾ, 50 ಗ್ರಾಂ MDMA ಮತ್ತು ಚರಸ್, 500 LSD ಸ್ಟ್ರಿಪ್ಸ್​, 10 ಕೆಜಿ ಗಾಂಜಾ, 2 ಕಾರು, 14 ಮೊಬೈಲ್​ಗಳನ್ನು ಜಪ್ತಿ ಮಾಡಲಾಗಿದೆ.

ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಕೇರಳ ಮೂಲದ 7 ಜನರು ಸೇರಿ ಒಟ್ಟು 10 ಆರೋಪಿಗಳನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ. ಜೊತೆಗೆ ಬಂಧಿತರಿಂದ 3 ಕೆಜಿ ಹೈಡ್ರೋ ಗಾಂಜಾ, 50 ಗ್ರಾಂ MDMA ಮತ್ತು ಚರಸ್, 500 LSD ಸ್ಟ್ರಿಪ್ಸ್​, 10 ಕೆಜಿ ಗಾಂಜಾ, 2 ಕಾರು, 14 ಮೊಬೈಲ್​ಗಳನ್ನು ಜಪ್ತಿ ಮಾಡಲಾಗಿದೆ.

ಮೈಸೂರು ರಸ್ತೆ ಸ್ಯಾಟ್​ಲೈಟ್​ ನಿಲ್ದಾಣ ಬಳಿ 2 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. 500 ಎಲ್​ಎಸ್​ಡಿ ಸ್ಟ್ರಿಪ್ಸ್​ ವಶಕ್ಕೆ ಪಡೆಯಲಾಗಿದೆ. 10 ಆರೋಪಿಗಳನ್ನು ಬಂಧಿಸಿ ಅಮೃತಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್​ ಮಾಹಿತಿ ನೀಡಿದ್ದಾರೆ.

ಇನ್ನು ಇತ್ತೀಚೆಗೆ ನಗರದಲ್ಲಿ ಡ್ರಗ್ಸ್ ಸಪ್ಲೈಗೆ ಸಿದ್ದವಾಗಿದ್ದ 3 ಕೋಟಿ ರೂ ಮೌಲ್ಯದ ಡ್ರಗ್ಸ್​​ ಸೀಜ್​ ಮಾಡಲಾಗಿದ್ದು, ಇಬ್ಬರು ಪೆಡ್ಲರ್​ಗಳನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದರು. ಹೊಸ ವರ್ಷದ ಪಾರ್ಟಿಗಳಿಗೆ ಮಾರಾಟ ಮಾಡಲು ಸಿದ್ಧವಾಗಿದ್ದ 3 ಕೋಟಿ ರೂ. ಮೌಲ್ಯದ 3.2 ಕೆ.ಜಿ. ಎಂಡಿಎಂಎ ಕ್ರಿಸ್ಟಲ್ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಪೊಲೀಸರು, ಇಬ್ಬರು ಡ್ರಗ್ಸ್​ ಪೆಡ್ಲರ್‌ಗಳನ್ನು ಬಂಧಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !