ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ಘೋಷಿಸಿದ್ದ ನಿವೃತ್ತಿ ಹಿಂಪಡೆದು, ಮತ್ತೆ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಆಟಗಾರ ಸುನಿಲ್ ಛೇತ್ರಿ.
ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ (ಎಐಎಫ್‌ಎಫ್), ಸುನಿಲ್ ಛೇತ್ರಿ ಮತ್ತೆ ಆಡಲಿದ್ದಾರೆ. ನಾಯಕ, ಲೀಡರ್, ದಿಗ್ಗಜ ಛೇತ್ರಿ ಮಾರ್ಚ್‌ನಲ್ಲಿ ಭಾರತ ಫುಟ್ಬಾಲ್ ತಂಡದ ಪರ ಆಡಲಿದ್ದಾರೆ ಎಂದು ಪೋಸ್ಟ್ ಮಾಡಿದೆ.
ಕಳೆದ ವರ್ಷ ಜೂನ್ ನಲ್ಲಿ ನಿವೃತ್ತಿ ಪ್ರಕಟಿಸಿದ್ದ ಛೇತ್ರಿ , ಅಂತಾರಾಷ್ಟ್ರೀಯ ಫುಟ್ಬಾಲ್‌ನಲ್ಲಿ ಗರಿಷ್ಠ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ವಿಶ್ವದಲ್ಲೇ 4ನೇ ಸ್ಥಾನದಲ್ಲಿದ್ದಾರೆ.