ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಸಿನಿಪ್ರಿಯರಿಗೆ ಗುಡ್ನ್ಯೂಸ್ ನೀಡಿದ್ದಾರೆ.
ಇನ್ಮುಂದೆ ನಮ್ಮ ಕನ್ನಡದ ಕಾರ್ಯಕ್ರಮಗಳಿಗಾಗಿ ಸಪರೇಟ್ ಒಟಿಟಿ ಇರುತ್ತದೆ ಎಂದು ಸಿಎಂ ಹೇಳಿದ್ದಾರೆ. ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ ಸಿನಿಮಾಗಳಿಗೆ ಒಟಿಟಿ ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಇನ್ನು ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಟಿಕೆಟ್ ದರ 200 ರೂ.ಗೆ ನಿಗದಿ ಪಡಿಸಲಾಗುವುದು. ಈ ಮೂಲಕ ಸರ್ಕಾರ ಮಲ್ಟಿಫ್ಲೆಕ್ಸ್ಗಳಲ್ಲಿ ಏಕರೂಪದ ದರನಿಗದಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.