ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಮಂಡನೆಯಾಗಿರುವ ಬಜೆಟ್‌ನಲ್ಲಿ ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಿದ್ದು, ಮೈಸೂರು, ಕಲಬುರಗಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೊಪ್ಪಳದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ರಾಯಚೂರಿನಲ್ಲಿ ಕಿದ್ವಾಯಿ ಆಸ್ಪತ್ರೆ, ಯಲಬುರ್ಗಾ, ಜೇವರ್ಗಿ, ಯಾದಗಿರಿಯಲ್ಲಿ ನರ್ಸಿಂಗ್ ಕಾಲೇಜು ಹಾಗೂ ಕೋಲಾರದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣದ ಬಗ್ಗೆಯೂ ಸಿಎಂ ಮಾಹಿತಿ ನೀಡಿದ್ದಾರೆ.