ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುವಸಬಲೀಕರಣ ಮತ್ತು ಕ್ರೀಡೆ ಅಭಿವೃದ್ಧಿಗೆ ಒಲಿಂಪಿಕ್ಸ್-2028 ತಯಾರಿಗಾಗಿ ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ರೂ. ಪ್ರೋತ್ಸಾಹ ಧನ ವಿತರಣೆ ಮಾಡಲಾಗುವುದು ಎಂದು ಸರ್ಕಾರ ಘೋಷಿಸಿದೆ.
ತಲಾ 2 ಕೋಟಿ ರೂ. ವೆಚ್ಚದಲ್ಲಿ 12 ತಾಲೂಕು ಕೇಂದ್ರಗಳಲ್ಲಿ ಕ್ರೀಡಾಂಗಣಗಳ ನಿರ್ಮಾಣ ಮಾಡಲಾಗುವುದು. ಈ ಕಾಮಗಾರಿಗಳಿಗೆ 12 ಕೋಟಿ ರೂ. ಹಂಚಿಕೆ ಮಾಡಲಾಗುವುದು. ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದು ಜಿಲ್ಲಾ ಕ್ರೀಡಾಂಗಣದಲ್ಲಿ ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ಶೂಟಿಂಗ್ ರೇಂಜ್ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.