ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್ʼ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ. ಇದರೊಂದಿಗೆ ಸಿದ್ದರಾಮಯ್ಯ ಅವರು ಕಳಂಕಮುಕ್ತರಾಗಿದ್ದು, ಕಾನೂನು ಹೋರಾಟಕ್ಕೆ ದೊಡ್ಡ ಜಯ ಸಿಕ್ಕಂತಾಗಿದೆ.
ಮುಡಾ ಹಗರಣದ ಆರೋಪಿಗಳಾಗಿದ್ದ ಸಿದ್ದರಾಮಯ್ಯ (A1), ಪಾರ್ವತಿ (A2), ಮಲ್ಲಿಕಾರ್ಜುನ ಸ್ವಾಮಿ (A3), ದೇವರಾಜು (A4) ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಉಳಿದ ಆರೋಪಿಗಳ ವಿರುದ್ಧ ತನಿಖೆ ಮುಂದುವರಿಸುವಂತೆ ಕೋರ್ಟ್ ಆದೇಶ ನೀಡಿದೆ.



