ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಇಡಿ ನೀಡಿದ್ದ ಸಮನ್ಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ವಿಚಾರಣೆ ಹಾಜರಾಗುವಂತೆ ಪಾರ್ವತಿ ಹಾಗೂ ಭೈರತಿ ಸುರೇಶ್ಗೆ ಇಡಿ ಸಮನ್ಸ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಇಬ್ಬರು ಹೈಕೋರ್ಟ್ ಮೊರೆ ಹೋಗಿದ್ದು, ಇಂದು (ಮಾರ್ಚ್ 07) ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಇಡಿ ಸಮನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.