ಶಾಸಕ ಮುನಿರತ್ನಗೆ ಶಾಕ್ ಕೊಟ್ಟ ಹೈಕೋರ್ಟ್: ವಂಚನೆ ಕೇಸ್ ರದ್ದುಪಡಿಸಲು ನಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ವಿರುದ್ಧದ ಸುಲಿಗೆ, ವಂಚನೆ ಕೇಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ (Contractor) ಚಲುವರಾಜು ಸಲ್ಲಿಸಿದ್ದ ದೂರು ರದ್ದತಿಗೆ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ವಜಾಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ಏನಿದು ಮುನಿರತ್ನ ಪ್ರಕರಣ?
ಗುತ್ತಿಗೆದಾರ ಚಲುವರಾಜು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು. ಜೊತೆಗೆ ರಕ್ಷಣಗೂ ಮನವಿ ಮಾಡಿದ್ದರು. ಜೀವ ಬೆದರಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಶಾಸಕ ಮುನಿರತ್ನ ಸೇರಿ ಎ2 ಮುನಿರತ್ನರ ಆಪ್ತ ಸಹಾಯಕ ವಿಜಯ್ ಕುಮರ್, ಎ3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ4 ವಸಂತ್ ಕುಮಾರ್.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!