ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಈಗ ವಕೀಲರ ಮುಂದೆ ಕಣ್ಣೀರಿಡುತ್ತಿದ್ದಾರೆ.
ನ್ಯಾಯಾಲಯ ಮುಂದೆ ಹಾಜರುಪಡಿಸಿ ಕರೆದೊಯ್ಯುವ ವೇಳೆ ತಮ್ಮ ವಕೀಲರ ಭೇಟಿಗೆ ರನ್ಯಾಗೆ ಅಧಿಕಾರಿಗಳು ಅವಕಾಶ ನೀಡಿದ್ದರು. ಈವೇಳೆ ತಾನು ತಪ್ಪು ಮಾಡಿದ್ದೇನೆ. ನನಗೆ ಇಂಥ ಸಂಕಷ್ಟದ ಪರಿಸ್ಥಿತಿ ಎದುರಿಸಲಾಗುತ್ತಿಲ್ಲ. ಕಣ್ಮುಚ್ಚಿದರೆ ವಿಮಾನ ನಿಲ್ದಾಣದ ಘಟನೆಯೇ ನೆನಪಾಗುತ್ತಿದೆ. ನನಗೆ ಅರೆ ಕ್ಷಣವೂ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಯಾತನೆಯಿಂದ ನನ್ನನ್ನು ಪಾರು ಮಾಡಿ ಎಂದು ವಕೀಲರಲ್ಲಿ ಕೇಳಿಕೊಂಡಿದ್ದಾರೆ.
ತಾನು ಹೇಗೆ ಈ ಸಂಕಷ್ಟಕ್ಕೆ ಸಿಲುಕಿದೆ ಎನ್ನುವುದೇ ಗೊತ್ತಾಗುತ್ತಿಲ್ಲ. ನಾನು ತಪ್ಪು ಮಾಡಿಬಿಟ್ಟಿದ್ದೇನೆ. ನನ್ನನ್ನು ಕಾಪಾಡಿ ಎಂದು ರನ್ಯಾ ವಿನಂತಿಸಿದ್ದಾರೆ.