ಹೊಸದಿಗಂತ ಡಿಜಿಟಲ್ ಡೆಸ್ಕ್:
2025ರ ಐಸಿಸಿ ಚಾಂಪಿಯನ್ಸ್ ಫೈನಲ್ ಗೂ ಮುನ್ನ ನ್ಯೂಜಿಲೆಂಡ್ ತಂಡಕ್ಕೆ ಆಘಾತ ಎದುರಾಗಿದೆ. ಫೈನಲ್‌ನಲ್ಲಿ ಮ್ಯಾಟ್ ಹೆನ್ರಿ ಆಡುವುದು ಅನುಮಾನ ಎನ್ನಲಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದ ವೇಳೆ ಹೆನ್ರಿ ಗಾಯಗೊಂಡಿದ್ದರು. ಈ ಬಗ್ಗೆ ಮಾಹಿತಿ ನೀಡಿದ ನ್ಯೂಜಿಲೆಂಡ್ ಮುಖ್ಯ ಕೋಚ್ ಗ್ಯಾರಿ ಸ್ಟೀಡ್, ಹೆನ್ರಿ ಮೈದಾನದಲ್ಲಿ ಬಿದ್ದಾಗ ಅವರ ಭುಜಕ್ಕೆ ಪೆಟ್ಟಾಗಿತ್ತು. ಆದರೆ ಈಗ ಫೈನಲ್‌ನಲ್ಲಿ ಆಡಲು ಸಾಧ್ಯವಾದಷ್ಟು ಪ್ರಯತ್ನಿಸುತ್ತಿದ್ದಾರೆ. ಶೀಘ್ರವೇ ಚೇತರಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದ್ದಾರೆ.
ಈ ಚಾಂಪಿಯನ್ಸ್ ಟ್ರೋಫಿಯಲ್ಲಿ ಹೆನ್ರಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ನಾಲ್ಕು ಪಂದ್ಯಗಳಲ್ಲಿ 10 ವಿಕೆಟ್‌ಗಳನ್ನು ಪಡೆದು ಅಗ್ರಸ್ಥಾನದಲ್ಲಿದ್ದಾರೆ. ಮಾರ್ಚ್ 2 ರಂದು ಭಾರತ ವಿರುದ್ಧದ ಪಂದ್ಯದಲ್ಲಿ ಹೆನ್ರಿ 42 ರನ್‌ಗಳಿಗೆ 5 ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು.