ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಬಜೆಟ್ ದೇಶಕ್ಕೆ ಮಾದರಿ. ಕರ್ನಾಟಕದ ಜನತೆಗೆ ಅನುಕೂಲ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
ಟನಲ್ ಆಗೇ ಆಗುತ್ತೆ. ಹೊಸ ಮೆಟ್ರೋ ಏನೇ ಮಾಡಿದರೂ ಅದರ ಜೊತೆಗೆ ಎಲಿವೇಟೇಡ್ ಕಾರಿಡಾರ್ ಕೂಡ ಮಾಡುತ್ತೇವೆ ಎಂದು ಹೇಳಿದ್ದಾರೆ.
ನಾವು ಹೇಳಿದಂತೆ 300 ಕಿಮೀ ರಸ್ತೆ ನಿರ್ಮಾಣ ಮಡುತ್ತೇವೆ. 3000 ಕೋಟಿ ವೆಚ್ಚದಲ್ಲಿ 300 ಕಿ.ಮೀ ರಸ್ತೆ ನಿರ್ಮಾಣ ಆಗಲಿದೆ ಎಂದು ತಿಳಿಸಿದ್ದಾರೆ. ಬಿಜೆಪಿಯವರು ಏನು ಬೇಕಾದರೂ ಮಾತಾಡಲಿ. ಪಾಪ ಅವರು ಇನ್ನೇನು ಮಾಡುತ್ತಾರೆ? ಇನ್ನೇನು ಹೇಳೋಕೆ ಸಾಧ್ಯ? ಎಂದು ಬಿಜೆಪಿ ಟೀಕೆಗಳಿಗೆ ಡಿಕೆಶಿ ತಿರುಗೇಟು ನೀಡಿದ್ದಾರೆ.